×
Ad

KSRTC ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 3,682 ಪ್ರಯಾಣಿಕರಿಂದ ದಂಡ ವಸೂಲಿ

Update: 2023-02-14 18:07 IST

ಬೆಂಗಳೂರು, ಫೆ. 14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ 3,269 ಪ್ರಕರಣಗಳನ್ನು ಪತ್ತೆಹಚ್ಚಿ, 3,682 ಮಂದಿ ಪ್ರಯಾಣಿಕರಿಂದ ಒಟ್ಟು 5.83 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ.

ಜನವರಿ ತಿಂಗಳಲ್ಲಿ ಕೆಎಸ್ಸಾರ್ಟಿಸಿ ತನಿಖಾ ತಂಡಗಳು ವಿಶೇಷ ತಪಾಸಣೆ ನಡೆಸಿ ದಂಡದ ರೂಪದಲ್ಲಿ ವಸೂಲಿ ಮಾಡಿದ್ದು, ಇದೇ ವೇಳೆ ಸಂಸ್ಥೆಯ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 83,113 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ದ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಲಾಗಿದೆ.

ಆದುದರಿಂದ ಸಾರ್ವಜನಿಕ ಪ್ರಯಾಣಿಕರು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ  ಸರಿಯಾದ ಟಿಕೆಟ್/ಪಾಸ್ ಪಡೆದು ಪ್ರಯಾಣ ಮಾಡಬೇಕು ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.

Similar News