×
Ad

ಚನ್ನಪಟ್ಟಣದಿಂದ ರಮ್ಯಾ ಸ್ಪರ್ಧೆ ವಿಚಾರ: ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...

Update: 2023-02-14 21:12 IST

ಮಂಡ್ಯ: ಮುಂಬರಲಿರುವ ವಿಧಾನಸಭೆ ಕ್ಷೇತ್ರ ಚುನಾವಣೆಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣ  ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಸಿ.ಪಿ. ಯೋಗೇಶ್ವರ್ ವಿರುದ್ಧ  ಪ್ರಬಲ ಅಭ್ಯರ್ಥಿಯೊಬ್ಬರ ಹುಡುಕಾಟದಲ್ಲಿರುವ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂಬ ವಿಚಾರವೊಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 

ಮಂಡ್ಯ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,''ಚನ್ನಪಟ್ಟಣ ಕ್ಷೇತ್ರದಲ್ಲಿ ನಟಿ ರಮ್ಯಾ ಸ್ಪರ್ಧಿಸುತ್ತಾರೆ ಎಂಬುದು ಮಾಧ್ಯಮ ಸೃಷ್ಟಿ ಅಷ್ಟೇ,  ನಾನು ಅವರನ್ನು ಸಿನೆಮಾ ವಿಚಾರದಲ್ಲಿ ಇತ್ತೀಚೆಗಷ್ಟೇ ಭೇಟಿಯಾಗಿದ್ದೆ. ನನ್ನ ಪ್ರಕಾರ ಅವರು ಸ್ಪರ್ಧಿಸುವುದಿಲ್ಲ'' ಎಂದು ಹೇಳಿದರು. 

''ಎಚ್‌.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ. ಜನರ ಇಚ್ಛೆಯಂತೆ ನಾನು ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ'' ಎಂದು ಸ್ಪಷ್ಟಪಡಿಸಿದರು. 

Full View

Similar News