ಪುಲ್ವಾಮಾ ಹುತಾತ್ಮರಿಗೆ ಪ್ರಧಾನಿಯಿಂದ ಶ್ರದ್ಧಾಂಜಲಿ
Update: 2023-02-14 22:39 IST
ಹೊಸದಿಲ್ಲಿ, ಫೆ. 14: ಪುಲ್ವಾಮದಲ್ಲಿ 2019ರಲ್ಲಿ ಬೆಂಗಾವಲು ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು.
‘‘ಪುಲ್ವಾಮದಲ್ಲಿ ಈ ದಿನ ನಾವು ಕಳೆದುಕೊಂಡ ವೀರ ಯೋಧರನ್ನು ಸ್ಮರಿಸುತ್ತಿದ್ದೇವೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದೂ ಮರೆಯುವುದಿಲ್ಲ. ಅವರ ಧೈರ್ಯ ಬಲಿಷ್ಠ ಹಾಗೂ ಅಭಿವೃದ್ಧಿಶೀಲ ಭಾರತವನ್ನು ನಿರ್ಮಾಣ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ’’ ಎಂದು ಪ್ರಧಾನಿ ಅವರು ಹೇಳಿದರು. ಆತ್ಮಾಹುತಿ ಬಾಂಬರ್ ಓರ್ವ ತನ್ನ ವಾಹನವನ್ನು ಸಿಆರ್ಪಿಎಫ್ ಬೆಂಗಾವಲು ವಾಹನಕ್ಕೆ ಢಿಕ್ಕಿ ಹೊಡೆಸಿದ ಪರಿಣಾಮ ಸಂಭವಿಸಿದ ಸ್ಫೋಟದಲ್ಲಿ 40ಕ್ಕೂ ಅಧಿಕ ಯೋಧರು ಮೃತಪಟ್ಟಿದ್ದರು.