×
Ad

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಪೊಲೀಸ್ ಕಸ್ಟಡಿಗೆ

Update: 2023-02-15 18:18 IST

ಉಡುಪಿ: ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಗಾಳದಲ್ಲಿ ಫೆ.5ರಂದು ನಡೆದ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಉಡುಪಿ ನ್ಯಾಯಾ ಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ಆರೋಪಿಗಳಾದ ಸುರತ್ಕಲ್‌ನ ಆಕಾಶ್ ಕರ್ಕೇರ (24) ಮತ್ತು ಪ್ರಸನ್ನ ಶೆಟ್ಟಿ (40) ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇವರ ಪೈಕಿ ಆಕಾಶ್ ಕರ್ಕೇರನನ್ನು ಒಂದು ವಾರ ಪೊಲೀಸ್ ಕಸ್ಟಡಿಗೆ ಹಾಗೂ ಪ್ರಸನ್ನ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.

ಫೆ.14ರಂದು ಸುರತ್ಕಲ್ ಕುಳಾಯಿಯ ದಿವೇಶ್ ಶೆಟ್ಟಿ(20) ಮತ್ತು ಲಿಖಿತ್ ಕುಲಾಲ್(21) ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಒಂದು ವಾರ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಇದೀಗ ಪೊಲೀಸ್ ಕಸ್ಟಡಿಯಲ್ಲಿರುವ ಮೂವರನ್ನು ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ತಲೆಮರೆಸಿಕೊಂಡಿರುವ ಪ್ರಕರಣದ ಪ್ರಮುಖ ಆರೋಪಿ ಕಟಪಾಡಿಯ ಯೋಗೀಶ್ ಆಚಾರ್ಯ, ನಾಗರಾಜ್, ಭೂಗತ ಪಾತಕಿ ಕಲಿ ಯೋಗೀಶ್ ಮತ್ತು ಕೃತ್ಯಕ್ಕೆ ಸಹಕರಿಸಿದ ಮುಕೇಶ್ ಹಾಗೂ ಇತರ ಆರೋಪಿಗಳಿಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

Similar News