ಕಾರು ಢಿಕ್ಕಿ: ಪಾದಚಾರಿ ಮೃತ್ಯು

Update: 2023-02-15 15:25 GMT

ಬೈಂದೂರು, ಫೆ.15: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಡ್ತರೆ ಗ್ರಾಮದ ಮಯೂರ ಪೆಟ್ರೋಲ್ ಬಂಕ್ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.14ರಂದು ರಾತ್ರಿ ನಡೆದಿದೆ.

ಮೃತರನ್ನು ಮಾಸ್ತಿ(45) ಎಂದು ಗುರುತಿಸಲಾಗಿದೆ. ಬೈಂದೂರು ಬಸ್ ನಿಲ್ದಾಣದ ಕಡೆಯಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಮಾಸ್ತಿಗೆ ಶಿರೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು,  ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News