ಪತ್ರಿಕಾ ಸ್ವಾತಂತ್ರ್ಯದ ಮೇಲೆ ದಾಳಿ: ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ ಕುರಿತು ಕೇಜ್ರಿವಾಲ್

Update: 2023-02-15 16:12 GMT

ಹೊಸದಿಲ್ಲಿ, ಫೆ. 15: ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಮಾಧ್ಯಮದ ಧ್ವನಿಯನ್ನು ಹತ್ತಿಕ್ಕುವುದು ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವುದಕ್ಕೆ ಸಮಾನವಾದುದು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್(Arvind Kejriwal) ಬುಧವಾರ ಹೇಳಿದ್ದಾರೆ.

ಬಿಬಿಸಿ(BBC)ಯ ದಿಲ್ಲಿ ಹಾಗೂ ಮುಂಬೈ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ದಾಳಿ ನಡೆಸಿದ ಒಂದು ದಿನದ ಬಳಿಕ ಕೇಜ್ರಿವಾಲ್ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಜೆಪಿಯ ವಿರುದ್ಧ ಯಾರೇ ಮಾತನಾಡಿದರೂ ಅವರ ಹಿಂದೆ ಸಿಬಿಐ(CBI), ಈ.ಡಿ. (E.D)ಹಾಗೂ ಐಟಿ(I.T)ಯನ್ನು ನಿಯೋಜಿಸುತ್ತಾರೆ ಎಂದು ಕೇಜ್ರಿವಾಲ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂಸ್ಥೆಗಳನ್ನು ಹತ್ತಿಕ್ಕಲು ಹಾಗೂ ಸಂಪೂರ್ಣ ದೇಶವನ್ನು ತನ್ನ ಗುಲಾಮನನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆಯೇ ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. 

Similar News