ಮಂಗಳೂರು: ಬಸ್ ಢಿಕ್ಕಿ; ರಸ್ತೆ ದಾಟುತ್ತಿದ್ದ ವೃದ್ಧೆ ಮೃತ್ಯು
Update: 2023-02-16 19:33 IST
ಮಂಗಳೂರು, ಫೆ.16: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿರುವುದಾಗಿ ಸಂಚಾರ ಉತ್ತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಮೃತ ವೃದ್ಧೆಯನ್ನು ಗೀತಾ (74) ಎಂದು ಗುರುತಿಸಲಾಗಿದೆ.
ಇವರು ಗುರುವಾರ ಬೆಳಗ್ಗೆ ಆಕಾಶಭವನದ ಆನಂದನಗರ ಸರ್ಕಲ್ ಸಮೀಪ ಇರುವ ಭಂಡಾರಿ ಟವರ್ಸ್ ಕಟ್ಟಡದ ಮುಂದಿನ ರಸ್ತೆ ದಾಟುತ್ತಿದ್ದಾಗ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿಕೊಂಡು ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಗೀತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ದಯಾನಂದ ಎಂಬವರು ನೀಡಿದ ದೂರಿನಂತೆ ಚಾಲಕ ವನೀಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.