ಡಿನೋಟಿಫಿಕೇಷನ್ ಪ್ರಕರಣ: ಮುಂದಿನ ವಿಚಾರಣೆ ವೇಳೆ ತಪ್ಪದೇ ಹಾಜರಿರುವಂತೆ ಹೆಚ್‌ಡಿಕೆಗೆ ಕೋರ್ಟ್ ಸೂಚನೆ
ಬೆಂಗಳೂರು, ಫೆ.16: ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ತಪ್ಪದೇ ಹಾಜರಿರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ.
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಹಾಜರಾತಿಯಿಂದ ವಿನಾಯಿತಿ ಕೋರಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.
ಆದರೆ, ಹೆಚ್‌ಡಿಕೆ ಪದೇ ಪದೇ ವಿಚಾರಣೆಗೆ ಗೈರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜನಪ್ರತಿನಿಧಿಗಳ ಕೋರ್ಟ್, ಮುಂದಿನ ವಿಚಾರಣೆ ವೇಳೆ ತಪ್ಪದೇ ಹೆಚ್‌ಡಿಕೆ ಅವರ ಹಾಜರಿಗೆ ಸೂಚನೆ ನೀಡಿತು.
ಈ ಹಿನ್ನೆಲೆಯಲ್ಲಿ ಹೆಚ್‌ಡಿಕೆ ಅವರ ಹಾಜರಿ ಇರಿಸುವುದಾಗಿ ವಕೀಲರ ಭರವಸೆ ನೀಡಿದರು. ಕೋರ್ಟ್ ವಿಚಾರಣೆಯನ್ನ ಮಾ.21ಕ್ಕೆ ಮುಂದೂಡಿತು.
ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಚಾಮರಾಜನಗರದ ಎಂ.ಎಸ್.ಮಹದೇವಸ್ವಾಮಿ ದೂರು ಸಲ್ಲಿಸಿದ್ದರು. ಬಿ ರಿಪೋರ್ಟ್ ತಿರಸ್ಕರಿಸಿ ನ್ಯಾಯಾಲಯ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.