ಮಲ್ಪೆ: ಗೂಡ್ಸ್ ವಾಹನದಲ್ಲಿ ವ್ಯಕ್ತಿಯ ಮೃತದೇಹ ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಪರಾರಿ
ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ
Update: 2023-02-16 20:39 IST
ಮಲ್ಪೆ, ಫೆ.16: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಅಪರಾಹ್ನದ ವೇಳೆ ನಡೆದಿದೆ.
ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ.
ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.