ಬಾರ್ಕೂರು ಕಚ್ಚೂರಿನಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ
Update: 2023-02-16 21:48 IST
ಉಡುಪಿ, ಫೆ.16: ಈ ತಿಂಗಳ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಫೆ.೨೧ರಂದು ಬೆಳಗ್ಗೆ ೧೧ಗಂಟೆಗೆ ಬ್ರಹ್ಮಾವರ ತಾಲೂಕಿನ ಬಾರಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಚ್ಚೂರು ಗ್ರಾಮದ ಕಚ್ಚೂರು ಶ್ರೀಮಾಲ್ತಿದೇವಿ ಸಭಾಭವನದಲ್ಲಿ ನಡೆಯಲಿದೆ.
ಆದ್ದರಿಂದ ಕಚ್ಚೂರು ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಯಲ್ಲಿ ನೀಡುವಂತೆ ಹಾಗೂ ಗ್ರಾಮಸ್ಥರು ಫೆ.೨೧ರಂದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.