Karnataka Budget 2023 Live Updates: ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

Update: 2023-02-17 07:17 GMT

- ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

- ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

-----------------------------------------------------------

-ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

---------------------------------------------------

- ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

- ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

- ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ


- ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

- ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

- ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

--------------------------------------------------------------

-ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

- ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

--------------------------------------------------------------

- ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

- ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

- ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

- ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

- ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

- ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ. 

-----------------------------------------------------

-ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

- 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ 'ಮಕ್ಕಳ ಬಸ್ಸು' ಯೋಜನೆಗಾಗಿ 100 ರೂ. ಕೋಟಿ ಅನುದಾನ


- ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

- 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

- ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

-----------------------------------------------------------------

- ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

- ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

- ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ


- ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ 

- 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

- ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

- ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

- ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

- ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ


- ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

- ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

- ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


- ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

- ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ 

- ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

- ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್


17 Feb 2023 10:10 AM: ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


 17 Feb 2023 9:45 AM: ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ


17 Feb 2023 9:20 AM: ಸಂಪುಟ ಸಭೆಗೆ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


17 Feb 2023 8:57 AM: ಬಜೆಟ್ ಪ್ರತಿಯನ್ನು ಸಿಎಂಗೆ ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು

ಬೆಂಗಳೂರು: 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು. 

ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Similar News