×
Ad

ಅಜ್ಮೀರ್‌: ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ಯಾಂಕರ್-ಟ್ರಕ್ ನಡುವೆ ಢಿಕ್ಕಿ; ನಾಲ್ವರು ಮೃತ್ಯು

Update: 2023-02-17 12:39 IST

ಜೈಪುರ: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಮಾರ್ಬಲ್ ಸಾಗಿಸುತ್ತಿದ್ದ ಟ್ರಕ್  ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-8ರಲ್ಲಿ ಗುರುವಾರ ರಾತ್ರಿ ರಾಣಿ ಬಾಗ್ ರೆಸಾರ್ಟ್ ಬಳಿ ಅಪಘಾತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಕಿ ಅಕ್ಕಪಕ್ಕದ ಅಂಗಡಿಗಳು ಹಾಗೂ  ಮನೆಗಳಿಗೆ ಆವರಿಸಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ.

"ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಹಾಗೂ  ಇನ್ನೊಬ್ಬರು ಗಾಯಗೊಂಡಿದ್ದಾರೆ. ಅಕ್ಕಪಕ್ಕದ ಅಂಗಡಿಗಳು ಮತ್ತು ನಿವಾಸಗಳು ಸಹ ಬೆಂಕಿಗೆ ಆಹುತಿಯಾಗಿವೆ" ಎಂದು ಅಜ್ಮೀರ್ ಪೊಲೀಸ್ ಸೂಪರಿಂಟೆಂಡೆಂಟ್ ಚುನಾರಾಮ್ ಜಾಟ್ ಹೇಳಿದ್ದಾರೆ.

ನಿನ್ನೆ ತಡರಾತ್ರಿ ಬೆಂಕಿಯನ್ನು ನಂದಿಸಲಾಗಿದ್ದು, ಇದೀಗ ಹೆದ್ದಾರಿಯಲ್ಲಿ ಸಂಚಾರ ದಟ್ಟನೆಯನ್ನು ಸರಿಪಡಿಸಲಾಗಿದೆ. ಪೊಲೀಸ್ ತಂಡಗಳು ಘಟನೆಯಿಂದ ಆಗಿರುವ ನಷ್ಟವನ್ನು ನಿರ್ಣಯಿಸುತ್ತಿವೆ ಹಾಗೂ ಮೃತದೇಹಗಳನ್ನು ಗುರುತಿಸುತ್ತಿವೆ ಎಂದು ಅವರು ಹೇಳಿದ್ದಾರೆ.

Similar News