ಕಾಂತಾವರ ಕನ್ನಡ ಸಂಘದ ದತ್ತಿ ಪ್ರಶಸ್ತಿ ಪ್ರಕಟ
ಕಾರ್ಕಳ, ಫೆ.17: ಕಾಂತಾವರ ಕನ್ನಡ ಸಂಘದ ಮೂರು ದತ್ತಿ ಪ್ರಶಸ್ತಿಗಳು ಘೋಷಣೆಯಾಗಿದೆ. ಉಡುಪಿ ಜಿಲ್ಲಾ ಗಮಕ ಕಲಾ ಪರಿಷತ್ ಅಧ್ಯಕ್ಷರಾಗಿರುವ ಸತೀಶ್ ಕುಮಾರ್ ಕೆಮ್ಮಣ್ಣು ಹೆಸರಿನ ಗಮಕ ಕಲಾ ಪ್ರವಚನ ಪ್ರಶಸ್ತಿಗೆ ಪ್ರಸಿದ್ಧ ಗಮಕ ವಾಚನಕಾರ ಡಾ.ರಾಘವೇಂದ್ರ ರಾವ್ ಪಡುಬಿದ್ರೆ ಆಯ್ಕೆಯಾಗಿದ್ದಾರೆ. ಪ್ರಸಿದ್ಧ ಗಮಕಿ ಉಡುಪಿಯ ಯಾಮಿನಿ ಭಟ್ ಸ್ಥಾಪಿಸಿದ ಗಮಕ ಕಲಾ ವಾಚನ ಪ್ರಶಸ್ತಿಗೆ ಮಂಜುಳಾ ಸುಬ್ರಹ್ಮಣ್ಯ ಭಟ್, ಮಂಚಿ ಅ ಮತ್ತು ಭಾರತ ಸರಕಾರದ 'ಶಿಲ್ಪಗುರು' ಪ್ರಶಸ್ತಿ ಪುರಸ್ಕೃತ ಕಾರ್ಕಳದ ಶಿಲ್ಪಿ ಕೆ.ಶಾಮರಾಯ ಆಚಾರ್ಯ ಹೆಸರಿನ ದತ್ತಿನಿಧಿಯ ಶಿಲ್ಪಕಲಾ ಪ್ರಶಸ್ತಿಗೆ ಶಿಲ್ಪಿ ಬಿ.ಎಸ್.ಭಾಸ್ಕರ ಆಚಾರ್ಯ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು, ತಾಮ್ರ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ. ಫೆ.26ರಂದು ಕಾಂತಾವರದಲ್ಲಿ ನಡೆಯುವ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನದ ಜೊತೆ ಮೂರು ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಾಂತಾವರ ಕನ್ನಡ ಸಂಘದ ಪ್ರಕಟನೆ ತಿಳಿಸಿದೆ.