ದೊಡ್ಡಬಳ್ಳಾಪುರ | ಕ್ರಿಕೆಟ್ ಪಂದ್ಯಾಟದ ವೇಳೆ ಜಗಳ: ಇಬ್ಬರು ಯುವಕರ ಹತ್ಯೆ
Update: 2023-02-17 18:49 IST
ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ ಜಿಲ್ಲೆ): ಕ್ರಿಕೆಟ್ ಪಂದ್ಯಾಟದ ವೇಳೆ ಕ್ಷಲ್ಲಕ ಕಾರಣಕ್ಕೆ ಜಗಳ ನಡೆದು ಇಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.
ಭರತ್ ಮತ್ತು ಪ್ರತೀಕ್ ಕೊಲೆಯಾದ ಯುವಕರು ಎಂದು ಪೊಲೀಸರು ಗುರುತಿಸಿದ್ದಾರೆ.
ಶುಕ್ರವಾರ ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಕ್ರಿಕೆಟ್ ಆಡುವಾಗ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಭರತ್, ಪ್ರತೀಕ್ಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.