ಸಚಿವ ಅಶ್ವತ್ಥನಾರಾಯಣ ಬಂಧನಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ

Update: 2023-02-17 16:06 GMT

ಬೆಂಗಳೂರು, ಫೆ.17: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕುವಂತೆ ಕೊಲೆಗೆ ಪ್ರಚೋದನೆ ನೀಡಿರುವ ಸಚಿವ ಅಶ್ವಥ್‍ನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸಿಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.

ಶುಕ್ರವಾರ ನಗರದ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಮುಂಭಾಗ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಅಶ್ವತ್ಥ ನಾರಾಯಣ್ ಮಾನಸಿಕ ದಿವಾಳಿತನ ಹಾಗೂ ಹತಾಶೆಯಿಂದ ಬಳಲುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಪ್ರಜ್ಞಾಹೀನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ರಾಜ್ಯದ ಜನತೆಗೆ ತಪ್ಪು ಸಂದೇಶ ಹೋಗುತ್ತದೆ. ಹಾಗಾಗಿ ಅವರ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬಿಬಿಎಂಪಿ ಮಾಜಿ ಮೇಯರ್ ಗಂಗಾಬಿಕೆ ಸೇರಿದಂತೆ ಪ್ರಮುಖರಿದ್ದರು.

Similar News