ರಾಜಸ್ಥಾನ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ರಾಜೀನಾಮೆ ಅಂಗೀಕರಿಸಿದ ಅಶೋಕ್ ಗೆಹ್ಲೋಟ್
Update: 2023-02-18 10:19 IST
ಜೈಪುರ: ರಾಜಸ್ಥಾನ ವಿಧಾನಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ಹಾಗೂ ಎಂಜಿನಿಯರಿಂಗ್ ಇಲಾಖೆ (ಪಿಎಚ್‌ಇಡಿ) ಖಾತೆಯನ್ನು ಸಹ ಹೊಂದಿರುವ ಕಾರಣ ಜೋಶಿ ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.
ಜನವರಿ 23 ರಂದು ಬಜೆಟ್ ಅಧಿವೇಶನ ಆರಂಭವಾಗುವ ಮೊದಲು ಜೋಶಿ ಅವರು ರಾಜೀನಾಮೆ ಸಲ್ಲಿಸಿದ್ದರು.
ರಾಜೀನಾಮೆಯನ್ನು ಮುಖ್ಯಮಂತ್ರಿ ಗೆಹ್ಲೋಟ್ ಶುಕ್ರವಾರ ಅಂಗೀಕರಿಸಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.