ಸಾಗರ| ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ: ಮಹಿಳೆ ಸ್ಥಳದಲ್ಲೇ ಮೃತ್ಯು
Update: 2023-02-18 12:47 IST
ಸಾಗರ: ಸ್ಕೂಟಿಗೆ ಕಾರುವೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನೇದರವಳ್ಳಿ ಸಮೀಪ ಶನಿವಾರ ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.
ಭದ್ರಾವತಿ ನಿವಾಸಿ ಶೃತಿ (23) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕಾರ್ಯನಿಮಿತ್ತ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದಾಗ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿದ್ದ ಶೃತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಶೀಲನೆ ನಡೆಸಿದರು.