ಬಂಟ್ವಾಳ: ಯುವಕನಿಗೆ ಚೂರಿ ಇರಿತ; ಪ್ರಕರಣ ದಾಖಲು
Update: 2023-02-18 19:53 IST
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆಮಂಗಳೂರು ಸಮೀಪ ಶನಿವಾರ ನಡೆದಿದೆ.
ಘಟನೆಯಿಂದ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಸುಲೈಮಾನ್ ಎಂಬಾತ ಗಾಯಗೊಂಡಿದ್ದು ತುಂಬೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯ ನಿವಾಸಿ ನಿಸಾರ್ ಎಂಬಾತ ಚೂರಿ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ಸುಲೈಮಾನ್ ಗೆ ಚೂರಿಯಿಂದ ಎದೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.