ಸಚಿನ್ ತೆಂಡುಲ್ಕರ್ ಅವರ ಸಾರ್ವಕಾಲಿಕ ದಾಖಲೆ ಮುರಿದ ವಿರಾಟ್ ಕೊಹ್ಲಿ

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 25,000 ರನ್

Update: 2023-02-19 09:22 GMT

ಹೊಸದಿಲ್ಲಿ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 25,000 ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಲುಪಿದರು.

ಹೊಸದಿಲ್ಲಿಯಲ್ಲಿ ನಡೆದ ಆಸ್ಟ್ರೇಲಿಯ ವಿರುದ್ಧದ ಎರಡನೇ ಟೆಸ್ಟ್‌ನ 3ನೇ ದಿನವಾದ ರವಿವಾರ ಕೊಹ್ಲಿ ಈ ಸಾಧನೆ ಮಾಡಿದರು. ಈ ಪ್ರಕ್ರಿಯೆಯಲ್ಲಿ, ಕೊಹ್ಲಿ ತಮ್ಮ ಆದರ್ಶಪುರುಷ ಹಾಗೂ 577 ಪಂದ್ಯಗಳಲ್ಲಿ ಈ ಹೆಗ್ಗುರುತನ್ನು ತಲುಪಿದ್ದ 'ಮಾಸ್ಟರ್ ಬ್ಲಾಸ್ಟರ್' ಸಚಿನ್ ತೆಂಡುಲ್ಕರ್ ಅವರ ದಾಖಲೆಯನ್ನು ಮೀರಿಸಿದರು.

ಮತ್ತೊಂದೆಡೆ ವಿರಾಟ್ 549 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ವಿರಾಟ್ ಹಾಗೂ ಸಚಿನ್ ನಂತರ ರಿಕಿ ಪಾಂಟಿಂಗ್ (588), ಜಾಕ್  ಕಾಲಿಸ್ (594), ಕುಮಾರ ಸಂಗಕ್ಕರ (608) ಹಾಗೂ ಮಹೇಲ ಜಯವರ್ಧನೆ (701) ಅವರಿದ್ದಾರೆ.

ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಕೆ.ಎಲ್. ರಾಹುಲ್ ಮತ್ತು ರೋಹಿತ್ ಶರ್ಮಾ ಬೇಗನೆ ನಿರ್ಗಮಿಸಿದ ನಂತರ ಕೊಹ್ಲಿ ಕ್ರೀಸ್‌ಗೆ ಬಂದರು., ಭಾರತದ ಮಾಜಿ ನಾಯಕ 31 ಎಸೆತಗಳಲ್ಲಿ 20 ರನ್‌ ಗಳಿಸಿ ಔಟಾದರು.

Similar News