ʼನನ್ನ ವೈಯಕ್ತಿಕ ಫೋಟೋಗಳನ್ನು ಬಳಸಬೇಡಿʼ: ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ

"ರೂಪಾ ಮೌದ್ಗಿಲ್‌ ವಿರುದ್ಧ‌ ಶೀಘ್ರದಲ್ಲೇ ಕಾನೂನು ಕ್ರಮ"

Update: 2023-02-19 13:48 GMT

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರ ಖಾಸಗಿ ಚಿತ್ರಗಳನ್ನು ಬಿಡುಗಡೆ ಮಾಡಿರುವ ಬೆನ್ನಲ್ಲ ರೋಹಿಣಿ ಸಿಂಧೂರಿ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ತನ್ನ ವೈಯಕ್ತಿಕ ಚಿತ್ರಗಳನ್ನು ಮಾಧ್ಯಮಗಳು ಬಳಸಬಾರದೆಂದು ಮನವಿ ಮಾಡಿದ್ದಾರೆ.

ರೋಹಿಣಿ ವಿರುದ್ಧ ಸರಣಿ ಆರೋಪ ಮಾಡಿರುವ ರೂಪಾ ಮೌದ್ಗಿಲ್‌ ಅವರು, ರೋಹಿಣಿ ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಕಳುಹಿಸಿದ್ದಾರೆನ್ನಲಾದ ಅವರ ಖಾಸಗಿ ಚಿತ್ರಗಳನ್ನು ಫೇಸ್‌ಬುಕ್‌ ನಲ್ಲಿ ಬಿಡುಗಡೆ ಮಾಡಿದ್ದರು. ರೂಪಾ ಮೌದ್ಗಿಲ್, ಚಿತ್ರ ಬಿಡುಗಡೆ ಮಾಡುತ್ತಿದ್ದಂತೆ ಭಾರೀ ಚರ್ಚೆ ಶುರುವಾಗಿದ್ದು, ಇಬ್ಬರು ಮಹಿಳಾ ಅಧಿಕಾರಿಗಳ ಪರ-ವಿರೋಧ ಚರ್ಚೆಗಳು ಆರಂಭವಾಗಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿಯ ಖಾಸಗಿ ಚಿತ್ರಗಳನ್ನು ಪ್ರಕಟಿಸಿ ಗಂಭೀರ ಆರೋಪ ಮಾಡಿದ ಡಿ. ರೂಪಾ

ಇದರ ಬೆನ್ನಲ್ಲೇ, ರೂಪಾ ಮೌದ್ಗಿಲ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದರು.

ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್ ಆಪ್ ಸ್ಟೇಟಸ್‌ಗಳಿಂದ ಸ್ಕ್ರೀನ್ ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನ ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್ ಅವರು ಬಳಸಿದ್ದಾರೆ ಎಂದು ರೋಹಿಣಿ ಪ್ರತ್ಯಾರೋಪ ಮಾಡಿದ್ದಾರೆ.

Similar News