ಬೆಳ್ತಂಗಡಿ: ಬೈಕ್ ಗೆ ಪಿಕಪ್ ಢಿಕ್ಕಿ; ವಿದ್ಯಾರ್ಥಿ ಮೃತ್ಯು
Update: 2023-02-20 13:47 IST
ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕ್ ಗೆ ಪಿಕಪ್ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಉಜ್ವಲ್ ಹೆಗ್ಡೆ (19) ಮೃತಪಟ್ಟ ವಿದ್ಯಾರ್ಥಿ.
ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದ ಉಜ್ವಲ್ ಚಲಾಯಿಸುತ್ತಿದ್ದ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಪಿಕಪ್ ಚಾಲಕ ಹರೀಶ್ ಪೂಜಾರಿ ಎಂಬವರು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಉಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ