×
Ad

ಕಾಂಗ್ರೆಸ್ ಸೇರಿದ ಬಿಜೆಪಿ, ಜೆಡಿಎಸ್ ಮಾಜಿ ಶಾಸಕರು

Update: 2023-02-20 15:42 IST

ಬೆಂಗಳೂರು, ಫೆ. 20: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಚಿಕ್ಕನಾಯಕನಹಳ್ಳಿಯ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್ ಮತ್ತು ಮಾಜಿ ಎಂಎಲ್‌ಸಿ, ಜೆಡಿಎಸ್ ಮುಖಂಡ ಮೈಸೂರಿನ ಸಂದೇಶ್ ನಾಗರಾಜ್ ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಇದೇ ವೇಳೆ ತುಮಕೂರು ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಹೆಚ್. ನಿಂಗಪ್ಪ, ಮಾಜಿ ಜಿ.ಪಂ ಸದಸ್ಯ ಸುಬ್ರಹ್ಮಣ್ಯ ಅವರು ಕೂಡ ಕಾಂಗ್ರೆಸ್ ಸೇರ್ಪಡೆಯಾದರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ಕೇಂದ್ರದ ಮಾಜಿ ಸಚಿವ ಕೆಎಚ್ ಮುನಿಯಪ್ಪ, ಮಾಜಿ ಸಚಿವರಾದ ಟಿಬಿ ಜಯಚಂದ್ರ, ಮಾಜಿ ಶಾಸಕ ಕೆಎನ್ ರಾಜಣ್ಣ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Similar News