×
Ad

ಪೊಕ್ಸೊ ಪ್ರಕರಣ: 60 ದಿನಗಳೊಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಸುತ್ತೋಲೆ

Update: 2023-02-20 22:17 IST

ಬೆಂಗಳೂರು, ಫೆ.20: ರಾಜ್ಯಾದ್ಯಂತ ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ, ಪೊಕ್ಸೊ ಪ್ರಕರಣಗಳ ತನಿಖೆಯನ್ನು 60 ದಿನಗಳೊಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಎಲ್ಲ ತನಿಖಾಧಿಕಾರಿಗಳಿಗೆ ಸುತ್ತೋಲೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

ಸೋಮವಾರ ವಿಧಾನ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಪರಾಧ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 2018ರಲ್ಲಿನ ತಿದ್ದುಪಡಿಯಂತೆ 60 ದಿನಗಳೊಳಗಾಗಿ ತನಿಖೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು. 

ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ಗಮನಿಸಿದರೆ ಸರಾಸರಿ 10ರಿಂದ 20ರಷ್ಟು ಹೆಚ್ಚಾಗಿದೆ. ಮಕ್ಕಳ ಮೇಲೆ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. 

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ 30 ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳಸಾಗಾಣಿಕೆ ನಿಷೇಧ ಕಾಯ್ದೆಗಳನ್ನು ತೆರೆಯಲಾಗಿದ್ದು, ಈ ಮಾದರಿಗಳ ಪ್ರಕರಣಗಳ ಇತ್ಯರ್ಥಕ್ಕಾಗಿ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ಮಕ್ಕಳ ನ್ಯಾಯಾಲಯವನ್ನು ಸ್ಥಾಪನೆ ಮಾಡಲಾಗಿದೆ ಎಂದರು. 

Similar News