ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ
Update: 2023-02-20 22:54 IST
ಮಂಗಳೂರು, ಫೆ.20: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಳೆದ 15 ದಿನಗಳಲ್ಲಿ ಭಾರಿ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು, 1.625 ಕೆಜಿ ಚಿನ್ನ ವಶಕ್ಕೆ ಪಡೆದಿದ್ದಾರೆ.
ಫೆ.1ರಿಂದ 15ರವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ದುಬೈ ಮತ್ತು ಬಹರೈನ್‌ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮಾರುಕಟ್ಟೆ ಮೌಲ್ಯ 91,35,850 ರೂ. ಆಗಿದೆ. ಚಿನ್ನವಲ್ಲದೆ 6,54,750 ರೂ. ಮೌಲ್ಯದ ವಿದೇಶಿ ನೋಟುಗಳನ್ನು ಕೂಡ ಒಬ್ಬ ಪ್ರಯಾಣಿಕನಿಂದ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್‌ನೊಂದಿಗೆ ಬೆರೆಸಿ ಅಂಡಾಕಾರದ ಪ್ಯಾಕೆಟ್‌ಗಳಾಗಿ ಮಾಡಿ ಗುದನಾಳ, ಟ್ರಾಲಿಬ್ಯಾಗ್‌ನ ಹ್ಯಾಂಡಲ್, ರಟ್ಟಿನ ಪೆಟ್ಟಿಗೆಯಲ್ಲಿ ಮರೆಮಾಚಿ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.