ಹೊನ್ನಾಳಿ: ವಿದ್ಯುತ್ ಪ್ರವಹಿಸಿ ಮಾಜಿ ಸೈನಿಕ ಮೃತ್ಯು
Update: 2023-02-20 23:20 IST
ದಾವಣಗೆರೆ,ಫೆ.20: ತೋಟದಲ್ಲಿ ತುಂಡಾಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಹರಿದ ಪರಿಣಾಮ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನಲ್ಲಿ ನಡೆದಿರುವುದು ವರದಿಯಾಗಿದೆ.
ಹೊನ್ನಾಳಿ ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಮಾಜಿ ಸೈನಿಕ ಎಸ್.ಟಿ.ಹನುಮಂತಪ್ಪ (50) ತೋಟಕ್ಕೆ ನೀರು ಬಿಡಲು ಹೋಗಿ ದ್ದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸ್ವಗ್ರಾಮ ತರಗನಹಳ್ಳಿಯ ರುದ್ರಭೂಮಿಯಲ್ಲಿ ಸೋಮವಾರ ಅಂತ್ಯಸಂಸ್ಕಾರ ನೆರವೇರಿತು.
ಹನುಮಂತಪ್ಪ ಅವರು ಭಾರತೀಯ ಅರೆಸೇನಾ ಪಡೆ ಸಿಆರ್‌ಪಿಎಫ್‌ನಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು ಎನ್ನಲಾಗಿದೆ.