ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ: SCST ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ

Update: 2023-02-21 06:43 GMT

ಮುಂಬೈ: ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಅವರ ಸಾವಿನ ವಿರುದ್ಧ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಸೋಮವಾರ ಮುಂಬೈನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎದುರು ಪ್ರತಿಭಟನೆ ನಡೆಸಿದರು.

ಗುಜರಾತ್‌ನ ಅಹಮದಾಬಾದ್‌ನ ಮಣಿನಗರ ಮೂಲದ 18 ವರ್ಷದ ವಿದ್ಯಾರ್ಥಿ ಫೆಬ್ರವರಿ 12 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವಿದ್ಯಾರ್ಥಿ ದಲಿತ ಎಂಬ ಕಾರಣಕ್ಕೆ ತಾರತಮ್ಯವನ್ನು ಎದುರಿಸುತ್ತಿದ್ದ ಎಂದು ಹೇಳಿಕೊಂಡಿದ್ದ, ಹಾಗೂ ಆತನ ಸಾವಿಗೆ ಇದೂ ಕಾರಣ ಇರಬಹುದು ಎಂದು ವಿದ್ಯಾರ್ಥಿಯ ಸಂಬಂಧಿಕರು ಆರೋಪಿಸಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳಾದ ಎಸ್‌ಎಫ್‌ಐ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸೋಲಂಕಿಗೆ ನ್ಯಾಯಕ್ಕಾಗಿ ಪ್ರತ್ಯೇಕ ಪ್ರತಿಭಟನೆಗಳನ್ನು ಆಯೋಜಿಸಿದ್ದವು.

ಆರ್‌ಪಿಐನ ಪ್ರಧಾನ ಕಾರ್ಯದರ್ಶಿ ಗೌತಮ್ ಸೋನವಾನೆ ಮಾತನಾಡಿ, ಸೋಲಂಕಿ ಅವರು ಜಾತಿ ಆಧಾರಿತ ರ‍್ಯಾಗಿಂಗ್ನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ. 

ಐಟಿ ಬಾಂಬೆಯ ನಿರ್ದೇಶಕರ ರಾಜೀನಾಮೆಗೆ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿದ್ದು, ವಿದ್ಯಾರ್ಥಿಯ ಸಾವಿಗೆ ಸಂಬಂಧಿಸಿದಂತೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿವೆ.

ಇದನ್ನು ಓದಿ:  ಅಮಿತ್ ಶಾ ಮಹಾರಾಷ್ಟ್ರದ ನಂ. 1 ಶತ್ರು: ಸಾಮ್ನಾ

Similar News