×
Ad

ಹಾರೋಹಳ್ಳಿ ತಾಲೂಕು ಉದ್ಘಾಟನೆ | ವೇದಿಕೆಯಲ್ಲೇ ಸಚಿವ ಅಶ್ವತ್ಥನಾರಾಯಣ - ಅನಿತಾ ಕುಮಾರಸ್ವಾಮಿ ವಾಕ್ಸಮರ

Update: 2023-02-21 13:30 IST

ರಾಮನಗರ: ಹಾರೋಹಳ್ಳಿ‌ ನೂತನ ತಾಲೂಕು ಉದ್ಘಾಟನಾ ಸಮಾರಂಭದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಹಾಗೂ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ನಡುವೆ ಸಮಾವೇಶದ ವೇದಿಕಯಲ್ಲೇ ವಾಕ್ಸಮರ ನಡೆಯಿತು.

ಜಿಲ್ಲೆಯ ಹಾರೋಹಳ್ಳಿಯ ‘ಕರ್ನಾಟಕ ಪಬ್ಲಿಕ್ ಶಾಲೆ’ ಆವರಣದಲ್ಲಿ ಇಂದು (ಮಂಗಳವಾರ) ನಡೆದ ತಾಲೂಕು ಉದ್ಘಾಟನಾ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಸಚಿವ ಅಶ್ವತ್ಥನಾರಾಯಣ ಅವರು, 'ತಾಲೂಕು ರಚನೆಗೆ ಬಿಜೆಪಿ ಸರ್ಕಾರ ಸಾಕಷ್ಟು ಶ್ರಮಿಮಿಸಿದೆ' ಎಂದು ಹೇಳಿದರು. ಬಳಿಕ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

'ತಾಲೂಕು ರಚನೆಗೆ ಮುಖ್ಯಮಂತ್ರಿ ಆಗಿದ್ದ ಹೆಚ್​.ಡಿ.ಕುಮಾರಸ್ವಾಮಿ ಅವರ ಕಾಲದಲ್ಲಿ (ಸಮ್ಮಿಶ್ರ ಸರಕಾರ) ಆದೇಶ ಆಗಿದ್ದು, ಇದನ್ನು ನಾನು ಫಾಲೋ ಅಪ್​​​​​ ಮಾಡಿದ್ದೇನೆ. ಇದಕ್ಕೆ ನನ್ನ ಬಳಿ ದಾಖಲೆಗಳಿವೆ' ಎಂದು ಹೇಳುತ್ತಿದ್ದಂತೆ ಸಭೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿಮ್ಮಲ್ಲಿದ್ದ ದಾಖಲೆಗಳನ್ನು ಮಾಧ್ಯಮಗಳ ಮುಂದೆ ತೋರಿಸಿ ಎಂದು ಒತ್ತಾಯಿಸಿದ್ದಾರೆ. 

Similar News