KSRTC 'ಅಂಬಾರಿ ಉತ್ಸವ' ಸ್ಲೀಪರ್ ಬಸ್ ಗಳ ಲೋಕಾರ್ಪಣೆ
ಬೆಂಗಳೂರು, ಫೆಬ್ರವರಿ 21: ಎಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
'ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಠ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು' ಎಂದರು.
ಕಂದಾಯ ಸಚಿವ ಆರ್.ಅಶೋಕ್, ಕೆ.ಎಸ್.ಆರ್.ಟಿ. ಸಿ ಅಧ್ಯಕ್ಷ ಚಂದ್ರಪ್ಪ , ಉಪಾಧ್ಯಕ್ಷ ಮೋಹನ್ ಮೆಣಸಿನಕಾಯಿ, ಶಾಸಕರಾದ ಸೋಮಶೇಖರ್ ರೆಡ್ಡಿ, ಸತೀಶ್ ರೆಡ್ಡಿ, ಯಾದವ್ , ನಿವೃತ್ತ ಐ.ಎ. ಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು
#KSRTC (#Karnataka) inducts #European style #Volvo 9600 series #Luxury AC #Sleeper #Buses. These new long buses are labelled #AmbaariUtsav.
— Rakesh Prakash (@rakeshprakash1) February 21, 2023
by TOI Sunil)@NammaBengaluroo @WFRising @namma_BTM @peakbengaluru @TOIBengaluru @BBPVedike @NammaKarnataka_ @vinaysreeni pic.twitter.com/1pKsPccD7B