×
Ad

ಅಧಿಕಾರಿಗಳ ಜಟಾಪಟಿ | ರೂಪಾ, ರೋಹಿಣಿ ಸಿಂಧೂರಿ ಸಹಿತ ಮೂವರು ಅಧಿಕಾರಿಗಳ ವರ್ಗಾವಣೆ

ರೂಪಾ ಪತಿ ಮುನೀಶ್ ಮೌದ್ಗಿಲ್ ರನ್ನೂ ವರ್ಗಾವಣೆ ಮಾಡಿದ ರಾಜ್ಯ ಸರಕಾರ

Update: 2023-02-21 14:08 IST

ಬೆಂಗಳೂರು; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಜಟಾಪಟಿ ಇದೀಗ ಬೀದಿಗೆ ಬಂದಿದ್ದು, ಈ ಸಂಬಂಧ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. 

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. 

ಡಿ. ರೂಪಾ ಅವರ ಪತಿ, ಐಎಎಸ್​ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಆರ್)ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ರಾಜ್ಯ ಸರಕಾರಕ್ಕೆ ಮುಜುಗರ:

ಅಧಿಕಾರಿಗಳಿಬ್ಬರ ಬಹಿರಂಗ ಜಗಳದಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ರಾಜ್ಯ ಸರಕಾರ, ಇಬ್ಬರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತ್ತು. ಇನ್ನು ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ರಾಜ್ಯ ಸರ್ಕಾರದಿಂದ ಇಬ್ಬರಿಗೂ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.  

Similar News