ತುಮಕೂರು | ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ
Update: 2023-02-21 14:38 IST
ತುಮಕೂರು: ಪ್ರಥಮ ಪಿಯುಸಿ ಆಂಗ್ಲ ಭಾಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿಗಳು ಕೇಳಿಬಂದ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆ ಮುಂದೂಡಲಾಗಿದೆ.
ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಕರು ಪರೀಕ್ಷೆ ಮುಂದೂಡಿ ಆದೇಶ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಾಟ್ಸ್‌ಗಳಲ್ಲಿ ಹರಿದಾಡುತ್ತಿದೆಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪದವಿ ಪೂರ್ಣ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.
ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ.