ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ

Update: 2023-02-21 09:34 GMT

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು. 

'20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ತೀರ್ಮಾನ ಮಾಡಿದ್ದೇವೆ. ಅಧಿವೇಶನದಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಿದ್ದೇವೆ' ಎಂದು ಇತ್ತೀಚೆಗೆ ಯಡಿಯೂರಪ್ಪ ಅವರು ಹೇಳಿದ್ದರು. 

Similar News