×
Ad

ಉಡುಪಿ: ಸಾಲ ಮೇಳ ಅಭಿಯಾನ, ಮಾಹಿತಿ ಕಾರ್ಯಕ್ರಮ

Update: 2023-02-21 19:41 IST

ಉಡುಪಿ : ಉಡುಪಿ ಜಿಪಂ, ಕರ್ನಾಟಕ ರಾಜ್ಯ ಗ್ರಾಮೀಣ ಜೀವ ನೋಪಾಯ ಅಭಿಯಾನ, ತಾಪಂ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾಪು ಹಾಗೂ ಜಿಲ್ಲಾ ಲೀಡ್ ಬ್ಯಾಂಕ್ ಇವುಗಳ ಸಹಯೋಗದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಗೆ ಅರ್ಜಿ ಸಲ್ಲಿಸಿದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ತಮ್ಮ ಉದ್ಯಮವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಸ್ತ್ರೀ ಸಾಮರ್ಥ್ಯ ಯೋಜನೆಯ ಸಾಲ ಮೇಳ ಅಭಿಯಾನ ಹಾಗೂ ಎಫ್‌ಎಸ್ ಎಸ್‌ಎಐ ಮತ್ತು ಜಿಎಸ್‌ಟಿ ಮಾಹಿತಿ ಹಾಗೂ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಫೆ.22ರಂದು ಉಡುಪಿ ತಾಪಂ ಸಭಾಂಗಣದಲ್ಲಿ, ಫೆ.23ರಂದು ಕುಂದಾಪುರ ತಾಪಂ ಸಭಾಂಗಣದಲ್ಲಿ ಮತ್ತು ಫೆ.24ರಂದು ತಾಪಂ ಸಭಾಂಗಣದಲ್ಲಿ ನಡೆ ಯುವ ಈ ಕಾರ್ಯಕ್ರಮದಲ್ಲಿ ಸಾಲಕ್ಕೆ ಸಂಬಂಧಿಸಿದ ವೈಯಕ್ತಿಕ ದಾಖಲೆಗಳು,  ಸ್ವ ಸಹಾಯ ಗುಂಪಿನ ದಾಖಲೆಗಳೊಂದಿಗೆ ಗ್ರಾಮೀಣ ಭಾಗದ ಮಹಿಳೆಯರು ಭಾಗವಹಿಸಿ ರಾಜ್ಯ ಸರಕಾರದ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದು ಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Similar News