×
Ad

ದೆಹಲಿ ಕರ್ನಾಟಕ ಸಂಘದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸದಿರಲು ಮಾಜಿ ಅಧ್ಯಕ್ಷರುಗಳ ನಿರ್ಧಾರ

Update: 2023-02-21 22:18 IST

ಬೆಂಗಳೂರು, ಫೆ.21: ದೆಹಲಿ ಕರ್ನಾಟಕ ಸಂಘವು ಇದೇ ಫೆ.25 ಮತ್ತು 26ರಂದು ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ. ಸಂಘವು ತನ್ನ ಮೂಲ ಉದ್ದೇಶದಿಂದ ಬಹಳ ದೂರ ಸರಿದಿದ್ದು, ಈ ಹಿನ್ನೆಲೆಯಲ್ಲಿ ನಾವು ಸಂಘದ 75ನೆ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದೇವೆ ಎಂದು ದೆಕಸಂ ಮಾಜಿ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸೇರಿ ಹಲವು ಮಾಜಿ ಅಧ್ಯಕ್ಷರುಗಳು ತೀರ್ಮಾನ ಕೈಗೊಂಡಿದ್ದಾರೆ. 

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಮಾವೇಶ ಆಗಬೇಕಿದ್ದ ಸುವರ್ಣ ಸಂಭ್ರಮವು ದೆಹಲಿ ಕನ್ನಡಿಗರನ್ನು ಕೇಂದ್ರದಲ್ಲಿಸಿಕೊಂಡು ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ. 

ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಲೇಖಕ, ಕಲಾವಿದರು ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಕಾಣುತ್ತಿಲ್ಲ. ಕಾರ್ಯಕಾರಿ ಸಮಿತಿಯ ಕೆಲವು ಸದಸ್ಯರಿಗೂ ವಿಷಯ ಸ್ಪಷ್ಟತೆಯಿಲ್ಲ. ಹಣಕಾಸಿನ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡಿಲ್ಲ. ಇಂಥ ಹಲವು ಕಾರಣಗಳಿಂದಾಗಿ  ದೆಹಲಿ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರುಗಳಾದ ಡಾ.ಪುರುಷೋತ್ತಮ ಬಿಳಿಮಲೆ, ಡಾ.ವೆಂಕಟಾಚಲ ಹೆಗಡೆ, ವಸಂತ ಶೆಟ್ಟಿ ಬೆಳ್ಳಾರೆ ಅವರು ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದಾರೆ. 

Similar News