ತುಳು ಅಕಾಡಮಿ ಭವನದ ಕಾಮಗಾರಿಗೆ ವೇಗ ನೀಡಲು ಡಾ. ಸಿ. ಸೋಮಶೇಖರ್ ಸೂಚನೆ

ಗಡಿ ಪ್ರದೇಶ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆ

Update: 2023-02-21 17:55 GMT

ಮಂಗಳೂರು : ನಗರದ ತುಳು ಸಾಹಿತ್ಯ ಅಕಾಡೆಮಿ ಭವನದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿದರ್ಶನ ನೀಡಿದರು.

ಅವರು ಫೆ. ೨೧ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಮಂಗಳೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ತುಳು ಸಾಹಿತ್ಯ ಅಕಾಡೆಮಿ ಭವನಕ್ಕೆ ೩.೬೦ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ, ಕಾಮಗಾರಿಯನ್ನು ನಿರ್ವಹಿಸುತ್ತಿ ರುವ ಲೋಕೋಪಯೋಗಿ ಇಲಾಖೆಯವರು ೨೦೨೩ರ ಮಾರ್ಚ್ ನೊಳಗೆ ಪೂರ್ಣಗೊಳಿಸಬೇಕು, ನಿಗದಿ ಪಡಿಸಿದ ಕಾಲಮಿತಿಯಲ್ಲಿ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅದನ್ನು ಉದ್ಘಾಟನೆಗೆ ಸಜ್ಜುಗೊಳಿಸು ವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರಯ್ಯ ಅವರಿಗೆ ಸೂಚನೆ ನೀಡಿದರು.

ತುಳು ಭವನದಲ್ಲಿ ಅಂತಿಮ ಹಂತದಲ್ಲಿ ಆಗಬೇಕಿರುವ ಕಾಮಗಾರಿಗಳು, ಲಿಫ್ಟ್ ಅಳವಡಿಕೆ  ಸೇರಿದಂತೆ ಅಗತ್ಯವಿ ರುವ ಕಾಮಗಾರಿಗಳ ಬಗ್ಗೆ ಅವರು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತುಳು ಭವನದಲ್ಲಿ ಈಗಾಗಲೇ ಶೇ.೭೫ರಿಂದ ೮೦ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣ ಗೊಳ್ಳುವ ವಿಶ್ವಾಸವಿದೆ ಎಂದರು.

ಅದರಂತೆ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಸಾಹಿತ್ಯ ಅಕಾಡಮಿ ಭವನಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಮೂರು ಕೋಟಿ ರೂಗಳ ಅನುದಾನ ನೀಡಲಾಗಿದೆ, ಆ ಕಟ್ಟಡದ ಮೂಲಭೂತ ಸೌಕರ್ಯಗಳಿಗೆ ಅಗತ್ಯವಿರುವ ಹಣವನ್ನು ಸಿಎಸ್‌ಆರ್ ಫಂಡ್ ನಡಿಯೂ ಪಡೆಯಲು ಅವಕಾಶವಿದೆ,  ಬ್ಯಾರಿ ಅಕಾಡಮಿ ಕಟ್ಟಡ ನಿರ್ಮಿಸಲು ಸೂಕ್ತ ನಿವೇಶನ ಹುಡುಕುವಂತೆ ಅಧ್ಯಕ್ಷರು ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರವಿಕುಮಾರ್  ಅವರು ಬ್ಯಾರಿ ಅಕಾಡೆಮಿಗೆ ಸೂಕ್ತವಾದ ನಿವೇಶನ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ೫ಕೋಟಿ ರೂ.ಗಳು ಬಿಡುಗಡೆಯಾಗಿದೆ, ಸರ್ಕಾರದಿಂದ ಪರಿಷ್ಕೃೃತ ಆಡಳಿತಾತ್ಮಕ ಮಂಜೂರಾತಿಯನ್ನು ಕೂಡಲೇ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ರವಿಕುಮಾರ್ ಅವರಿಗೆ ತಿಳಿಸಿದ ಅವರು,
ಕಾಸರಗೋಡಿನಲ್ಲಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಕನ್ನಡ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ೯ ಸದಸ್ಯರನ್ನೊಳಗೊಂಡ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ, ಅವರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ವೇದಿಕೆಯಲ್ಲಿದ್ದರು.

ಕಾಸರಗೋಡಿನಲ್ಲಿ ಕಯ್ಯಾರ ಕಿಞ್ಞಣ್ಣ ರೈ ಹೆಸರಿನ ಕನ್ನಡ ಸಂಸ್ಕೃೃತಿ ಭವನ ನಿರ್ಮಾಣದ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಅಕಾಡೆಮಿಗಳ ರಿಜಿಸ್ಟ್ರಾರ್ ಗಳು, ಕನ್ನಡ ಮತ್ತು ಸಂಸ್ಕೃೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Similar News