ನೇಪಾಳದಲ್ಲಿ 4.4 ತೀವ್ರತೆಯ ಭೂಕಂಪ: ದಿಲ್ಲಿಯಲ್ಲೂ ಕಂಪಿಸಿದ ಭೂಮಿ

Update: 2023-02-22 10:14 GMT

ಹೊಸದಿಲ್ಲಿ: ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ನೇಪಾಳಕ್ಕೆ ಅಪ್ಪಳಿಸಿದ್ದರಿಂದ ಬುಧವಾರ ಮಧ್ಯಾಹ್ನ ದಿಲ್ಲಿ-ಎನ್‌ಸಿಆರ್‌ನಲ್ಲಿ ಲಘು ಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

ನೇಪಾಳದ ಜುಮ್ಲಾದಿಂದ 69 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಆಳವು 10 ಕಿ.ಮೀ ಆಗಿದ್ದು, ಮಧ್ಯಾಹ್ನ 1.30 ರ ಸುಮಾರಿಗೆ ಸಂಭವಿಸಿದೆ.

ನೇಪಾಳದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತಿವೆ. ಇದಕ್ಕೂ ಮುನ್ನ ಜನವರಿ 24 ರಂದು ನೇಪಾಳದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ, ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪವಾಗಿತ್ತು. ಬುಧವಾರ ದೋಟಿ ಜಿಲ್ಲೆಯಲ್ಲಿ ಮನೆ ಕುಸಿದ ಘಟನೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದರು. ದಿಲ್ಲಿ-ಎನ್‌ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಈ ಭಾಗಗಳಲ್ಲಿ ಭೂಕಂಪನದ ಸಾಧ್ಯತೆಯನ್ನು ಈಗಾಗಲೇ ತಜ್ಞರು ಅಂದಾಜಿಸಿದ್ದರು.

Similar News