ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ: ಟಿ.ಎನ್.ಪ್ರತಾಪನ್
ಉಡುಪಿ, ಫೆ.22: ಬಿಜೆಪಿಯ ಸರಕಾರದ ಜನವಿರೋಧಿ ನೀತಿಯಿಂದ ಜನರು ಕಂಗೆಟ್ಟಿದ್ದು, ಜನರು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರದಲ್ಲಿರಲು ಬಯಸುತ್ತಿದ್ದಾರೆ. ಆದುದರಿಂದ 2023ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆರಲಿದೆ ಎಂದು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ತ್ರಿಸೂರಿನ ಸಂಸದ ಟಿ.ಎನ್.ಪ್ರತಾಪನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಬಿಎಲ್‌ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯ ಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆಗಳಿಗೆ ಭೇಟಿ ನೀಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರು ಪ್ರಯತ್ನಿಸಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್‌ನಲ್ಲಿ ಹೇಳಲಾದ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಮನೆಯ ಗೃಹಿಣಿಗೆ 2,000ರೂ. ಬಗ್ಗೆ ಜನರಿಗೆ ಮಾಹಿತಿ ನೀಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 132 ಬಿಎಲ್‌ಎ-2 ಮತ್ತು ಬೂತ್ ಅಧ್ಯಕ್ಷರು ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 94 ಬಿಎಲ್‌ಎ-2 ಮತ್ತು ಬೂತ್ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವಿಸಲಾಯಿತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿದರು.
ಸಭೆಯಲ್ಲಿ ರಾಜ್ಯ ಮೀನುಗಾರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಸುನೇಗಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿನೇಶ್ ಪುತ್ರನ್, ಸುಕುಮಾರ್, ನರಸಿಂಹಮೂರ್ತಿ, ಮುರಳಿ ಶೆಟ್ಟಿ, ಗಣೇಶ್ ನೆರ್ಗಿ, ಶ್ಯಾಮಲ ಭಂಡಾರಿ, ಗೀತಾ ವಾಗ್ಲೆ, ಅಣ್ಣಯ್ಯ ಶೇರಿಗಾರ್, ಜಯ ಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ರೋಶನ್ ಶೆಟ್ಟಿ, ಸೌರಭ್ ಬಲ್ಲಾಳ್, ಗಾಯತ್ರಿ, ದಿವಾಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ನಗರಸಭಾ ಸದಸ್ಯರು, ಪಂಚಾಯತ್ ಸದಸ್ಯರು ಹಾಗೂ ರಾಜ್ಯ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿದರು. ಬ್ರಹ್ಮರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನಕರ್ ಹೇರೂರು ವಂದಿಸಿದರು. ಸತೀಶ್ ಕೊಡವೂರು ಹಾಗೂ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು.