×
Ad

ದ.ಕ.ಜಿಲ್ಲೆಯಿಂದ ರಮಾನಾಥ ರೈ, ಯು.ಟಿ. ಖಾದರ್ ಸೇರಿದಂತೆ ಎಐಸಿಸಿಗೆ 6 ಮಂದಿ ನೇಮಕ

Update: 2023-02-22 19:01 IST

ಮಂಗಳೂರು, ಫೆ. 22: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ  ಐವನ್ ಡಿಸೋಜ ಅವರು ನೇಮಕರಾಗಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ವಿಷಯ ಪರಿಣಿತರಾಗಿ ಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿರುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News