×
Ad

ಫೆ.26ರಂದು ವಿದ್ಯಾರ್ಥಿ ನಿಲಯ, ಆದಿವಾಸಿ ಸಮುದಾಯ ಭವನ ಉದ್ಘಾಟನೆ

Update: 2023-02-22 19:19 IST

ಉಡುಪಿ, ಫೆ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ  ಇಲಾಖೆ, ನಗರಸಭೆ ಉಡುಪಿ ಹಾಗೂ ಕೊರಗ ಸಂಘಟನೆಗಳ ಸಹಯೋಗದೊಂದಿಗೆ ಬೀಡಿನಗುಡ್ಡೆಯಲ್ಲಿ ನಿರ್ಮಾಣಗೊಂಡ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಪುತ್ತೂರಿನಲ್ಲಿ ನಿರ್ಮಾಣಗೊಂಡ ಆದಿವಾಸಿ ಸಮುದಾಯ ಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.26ರಂದು ಬೆಳಗ್ಗೆ 10 ಗಂಟೆಗೆ ನಗರದ ಪುತ್ತೂರು ಆದಿವಾಸಿ ಸಮುದಾಯ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್.ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚಿಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಪಿ.ಎಸ್‌ಕಾಂತರಾಜ್, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್‌ದೇಸಾಯಿ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಶಾಸಕರ ಭೇಟಿ: ಪುತ್ತೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಆದಿವಾಸಿ ಸಮುದಾಯ ಭವನಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಇಂದು ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಹಾಗೂ ಉದ್ಘಾಟನಾ ಕಾರ್ಯಕ್ರಮಗಳ ಪೂರ್ವತಯಾರಿ ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಭೀಮಸೇನ್, ಕಂದಾಯ ನಿರೀಕ್ಷಕ ಉಪೇಂದ್ರ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿ ಕಾರಿ ದೂದ್‌ಪೀರ್, ಕೊರಗ ಸಮುದಾಯದ ಮುಖಂಡರಾದ ಗಣೇಶ್, ಬೊಗ್ರ ಕೊರಗ ಉಪಸ್ಥಿತರಿದ್ದರು.

Similar News