×
Ad

ಕಾರ್ಕಳ: 26ಕ್ಕೆ ಜಿಲ್ಲಾ ಮಲೆಕುಡಿಯ ಸಭಾಭವನ ಉದ್ಘಾಟನೆ

Update: 2023-02-22 20:58 IST

ಉಡುಪಿ, ಫೆ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಹಾಗೂ ಗ್ರಾಮ ಪಂಚಾಯತ್ ಮಾಳ ಇವರ ಸಹಯೋಗದೊಂದಿಗೆ ಜಿಲ್ಲಾ ಮಲೆಕುಡಿಯ ಸಭಾಭವನದ ಉದ್ಘಾಟನಾ ಸಮಾರಂಭ ಫೆ.26ರಂದು ಸಂಜೆ 4 ಗಂಟೆಗೆ ಕಾರ್ಕಳ ತಾಲೂಕು ಮಾಳ ಪೇರಡ್ಕದಲ್ಲಿ ನಡೆಯಲಿದೆ.

ಸಭಾಭವನವನ್ನು ರಾಜ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಉದ್ಘಾಟಿಸಲಿದ್ದು, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಚಿವ  ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಗಣ್ಯರು ಅಲ್ಲದೇ ಮಾಳ ಗ್ರಾಪಂ ಅಧ್ಯಕ್ಷೆ ರಕ್ಷಿತಾ ಶೆಟ್ಟಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಪಿ.ಎಸ್.ಕಾಂತರಾಜ್, ರಾಜ್ಯ ಮಲೆ ಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಮಲೆಕುಡಿಯ ಸಂಘದ ಜಿಲ್ಲಾ ಅಧ್ಯಕ್ಷ ಗಂಗಾಧರ ಗೌಡ ಹಾಗೂ ಇತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Similar News