ಫೆ.27ರಂದು ಸಿಆರ್‌ಝಡ್ ಕಾಯ್ದೆ ಕುರಿತು ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ
Update: 2023-02-22 21:04 IST
ಉಡುಪಿ, ಫೆ.22: ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಕಾಯ್ದೆಯ ಕುರಿತು ಜಿಲ್ಲೆಯ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮವು ಫೆ.27ರಂದು ಅಪರಾಹ್ನ 3:30ಕ್ಕೆ ನಗರದ ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಕರಾವಳಿ ನಿಯಂತ್ರಣ ವಲಯದ ಜಿಲ್ಲಾ ಪ್ರಾದೇಶಿಕ ನಿರ್ದೇಶಕರು (ಪರಿಸರ) ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಕೈಗಾರಿಕೋದ್ಯಮಿಗಳು ಇದರಲ್ಲಿ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ದೂ: 9448623952ನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.