ವಿಟ್ಲ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕಾರು ಪಲ್ಟಿ
Update: 2023-02-23 09:43 IST
ವಿಟ್ಲ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಕಾರೊಂದು ಪಲ್ಟಿಯಾದ ಘಟನೆ ವಿಟ್ಲ ಕಂಬಳಬೆಟ್ಟು ಎಂಬಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.
ಘಟನಾ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.