100 ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ಕೆ.ಸುಧಾಕರ್

Update: 2023-02-23 12:55 GMT

ಬೆಂಗಳೂರು, ಫೆ.23: ರಾಜ್ಯ ವ್ಯಾಪಿ ನೂರು ಪ್ರಾಥಮಿಕ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಐಹೊಳೆ ಡಿ.ಮಹಲಿಂಗಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ 100 ಪಿಎಚ್‍ಸಿ(ಪ್ರಾಥಮಿಕ ಆರೋಗ್ಯ ಕೇಂದ್ರ) ಗಳ ಪೈಕಿ 43 ಪಿಎಚ್‍ಸಿಗಳನ್ನು ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಲಾಗಿದೆ. ಬಾಕಿ ಇರುವ 57 ಪಿಎಚ್‍ಸಿಗಳನ್ನು ಮೇಲ್ದರ್ಜೆಗೇರಿಸಲಗುವುದು ಎಂದು ಹೇಳಿದರು.

ರಾಯಭಾಗ ತಾಲೂಕಿನ ಹಾರೋಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 25 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಕಟ್ಟಡ, ಉಪಕರಣ, ಪೀಠೋಪಕರಣಗಳಿಗೆ 910 ಲಕ್ಷ ರೂ., ಮಾನಸಂಪನ್ಮೂಲಕ್ಕೆ 190 ಲಕ್ಷ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದರು.

Similar News