×
Ad

ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ

Update: 2023-02-23 19:30 IST

ಬೆಂಗಳೂರು, ಫೆ.23: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿ ಎಲ್ಲ ಪ್ರತಿವಾದಿಗಳಿಗೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಇದರಿಂದ, ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ನನ್ನ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡದಂತೆ ಡಿ.ರೂಪಾ ಅವರಿಗೆ ನಿರ್ದೇಶಿಸಬೇಕು ಮತ್ತು ನನ್ನ ಮಾನ ಹಾನಿಯಾಗುವಂತಹ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ಪ್ರತಿಬಂಧಕ ಆದೇಶ ಹೊರಡಿಸಬೇಕು ಎಂದು ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಪೀಠ, ರೂಪಾ ಸೇರಿ ಎಲ್ಲ ಮಾಧ್ಯಮಗಳಿಗೂ ನೋಟಿಸ್ ಜಾರಿ ಮಾಡಿದೆ.

ರೋಹಿಣಿ ಸಿಂಧೂರಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಐಪಿಎಸ್ ಡಿ ರೂಪಾ ಅವರಿಗೂ ಕೋರ್ಟ್ ಕಾಲಾವಕಾಶ ನೀಡಿ ಮುಂದಿನ ವಿಚಾರಣೆಯನ್ನು ಮಾ.7ಕ್ಕೆ ಮುಂದೂಡಿದೆ.

ರೋಹಿಣಿ ಸಲ್ಲಿಸಿದ್ದ ಅರ್ಜಿಯನ್ನು ಫೆ.22ರಂದು ಕೋರ್ಟ್ ಅರ್ಜಿ ವಿಚಾರಣೆ ನಡೆಸಿ ತೀರ್ಪುನ್ನು ಫೆ.23ಕ್ಕೆ ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಎಲ್ಲ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದೆ.   

Similar News