×
Ad

ಹಾವಂಜೆ ಗ್ರಾಪಂ ಉಪ ಚುನಾವಣೆ: ಶಾಲಾ ಕಾಲೇಜುಗಳಿಗೆ ರಜೆ

Update: 2023-02-23 21:51 IST

ಉಡುಪಿ : ಗ್ರಾಮ ಪಂಚಾಯತ್ ಉಪಚುನಾವಣೆಗೆ ಸಂಬಂಧಿ ಸಿದಂತೆ, ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಪಂ ವ್ಯಾಪ್ತಿಯಲ್ಲಿ ಫೆ.25 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ  ಗ್ರಾಪಂ ಮತ ಕ್ಷೇತ್ರಗಳಲ್ಲಿ ರುವ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರಕಾರಗಳ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳ, ಎಲ್ಲಾ ವ್ಯವಹಾರಿಕ ಸಂಸ್ಥೆಗಳ ಔದ್ಯಮಿಕ ಸಂಸ್ಥೆಗಳ ಮತ್ತು ಇತರ ಸಂಸ್ಥೆಗಳಲ್ಲಿ  ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಫೆ.25ರ ಶನಿವಾರ ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, ಪ್ರಜಾ ಪ್ರತಿನಿಧಿ ಕಾಯ್ದೆ, ೧೯೫೧ರ ಸೆಕ್ಷನ್-೧೩೫ಬಿ ಅಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಅವರ ಪ್ರಕಟಣೆ ತಿಳಿಸಿದೆ.

Similar News