×
Ad

FIR ದಾಖಲಿಸಿಕೊಳ್ಳಿ: ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಆಯುಕ್ತರಿಗೆ ಪತ್ರ ಬರೆದ ರೋಹಿಣಿ ಸಿಂಧೂರಿ

Update: 2023-02-23 22:07 IST

ಬೆಂಗಳೂರು: 'ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಿ' ಎಂದು ರೋಹಿಣಿ ಸಿಂಧೂರಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. 

ಐಟಿ ಕಾಯ್ದೆ, ಐಪಿಸಿ ವಿವಿಧ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಿಕೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಐಪಿಸಿ ಸೆಕ್ಷನ್ 354ಸಿ, 463, 509, 504, 120ಬಿ, 378 ಹಾಗೂ ಐಟಿ ಕಾಯ್ದೆ ಸೆಕ್ಷನ್ 43, 66, 66ಬಿ, 66ಇ, 67, 67ಎ, 71, 72 ಹಾಗೂ 74ರಡಿ ದೂರು ದಾಖಲಿಸುವಂತೆ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

Similar News