ಮುಡಿಪು ಸರಕಾರಿ ಪದವಿ ಕಾಲೇಜಿನ ಮೂಲಭೂತ ಸೌಕರ್ಯಕ್ಕೆ ಬದ್ಧ: ಸಚಿವ ಡಾ.ಅಶ್ವತ್ಥನಾರಾಯಣ

Update: 2023-02-23 17:13 GMT

ಬೆಂಗಳೂರು, ಫೆ.23: ಮಂಗಳೂರಿನ ಮಡಿಪು ಸರಕಾರಿ ಪದವಿ ಕಾಲೇಜಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಗುರುವಾರ ವಿಧಾನಸಭಾಯಲ್ಲಿ ಪ್ರಶ್ನೋತ್ತರ ವೇಳೆ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಪ್ರಸ್ತಾಪಿಸಿ, ಮಡಿಪು ಸರಕಾರಿ ಪದವಿ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಆದರೆ, ಹಲವು ದಿನಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಈ ಸಂಬಂಧ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಡಾ. ಅಶ್ವತ್ಥನಾರಾಯಣ ಉತ್ತರಿಸಿ, ಮುಡಿಪು ಸರಕಾರಿ ಪದವಿ ಕಾಲೇಜಿಗೆ 2015-16ನೆ ಸಾಲಿನ ಸಾಮಾನ್ಯ ಯೋಜನೆಯಡಿ 2 ಕೋಟಿ ಮೊತ್ತದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಹಂತ ಹಂತವಾಗಿ ಇನ್ನಷ್ಟು ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. 

Similar News