ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ
Update: 2023-02-23 23:14 IST
ಬೆಂಗಳೂರು, ಫೆ.23: ನ್ಯಾಯವಾದಿಗಳು ಯಾವುದೆ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸುವುದಕ್ಕಾಗಿ ಹಾಗೂ ಅದಕ್ಕೆ ಸಂಬಂಧಿಸಿದ ಮತ್ತು ಪ್ರಾಸಂಗಿಕವಾದ ವಿಷಯಗಳಿಗಾಗಿ ಅವರ ಮೇಲಿನ ಹಿಂಸೆಯನ್ನು ನಿಷೇಧಿಸಲು ಮತ್ತು ಅವರಿಗೆ ರಕ್ಷಣೆಯನ್ನು ಒದಗಿಸಲು ಉದ್ದೇಶಿಸಿರುವ ‘ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ-2023’ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿತು.