ಉಪ ಲೋಕಾಯುಕ್ತ-2 ಹುದ್ದೆ ಭರ್ತಿಗೆ ಕೋರಿದ ಅರ್ಜಿ: ಹೈಕೋರ್ಟ್ ನಿಂದ ನೋಟಿಸ್ ಜಾರಿ

Update: 2023-02-23 17:54 GMT

ಬೆಂಗಳೂರು, ಫೆ.23: ಖಾಲಿ ಇರುವ ಎರಡನೆ ಉಪ ಲೋಕಾಯುಕ್ತ ಹುದ್ದೆ ಭರ್ತಿಗೆ ನಿರ್ದೇಶಿಸಬೇಕು ಎಂಬ ಕೋರಿಕೆಯ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ನ್ಯಾ.ಬಿ.ಎಸ್.ಪಾಟೀಲ್ ಅವರು ಎರಡನೆ ಉಪ ಲೋಕಾಯುಕ್ತರಾಗಿ 2016ರ ನವೆಂಬರ್​ 20ರಂದು ನೇಮಕಗೊಂಡಿದ್ದರು. ನಂತರ ಅವರೇ 2022ರ ಜೂ.14ರಂದು ಲೋಕಾಯುಕ್ತರಾಗಿ ನೇಮಕಗೊಂಡರು. ಅಂದಿನಿಂದ ಎರಡನೆ ಉಪ ಲೋಕಾಯುಕ್ತರ ಹುದ್ದೆ ಖಾಲಿಯಿದ್ದು, ಈವರೆಗೂ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

Similar News