ಧಾರವಾಡ | ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಓರ್ವ ಪಾದಚಾರಿ ಸೇರಿ ಐವರು ಸ್ಥಳದಲ್ಲಿಯೇ ಮೃತ್ಯು

Update: 2023-02-24 03:55 GMT

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ವರದಿಯಾಗಿದೆ. 

ಮೃತರನ್ನು ನಾಗಪ್ಪ ಈರಪ್ಪ ಮುದ್ದೋಜಿ(29), ಅವರಾದಿ ಗ್ರಾಮದ ಮಹಂತೇಶ್ ಬಸಪ್ಪ ಮುದ್ದೊಜಿ(40), ಬಸವರಾಜ್ ಶಿವಪುತ್ರಪ್ಪ ನರಗುಂದ(35), ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ, ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ (35) (ಪಾದಚಾರಿ) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿಯಿಂದ ಧಾರವಾಡ ಕಡೆ ಕಾರಿನಲ್ಲಿ ತೆರಳುತ್ತಿದ್ದ ಕಾರು ತೇಗೂರು ಗ್ರಾಮದ ಬಳಿ ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗರಗ್ ಠಾಣೆ ಪೊಲೀಸದು ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. 

Similar News