×
Ad

ವನ್ಯಮೃಗಗಳು ಜನ ವಸತಿ ಪ್ರದೇಶಗಳಿಗೆ ಬರದಂತೆ ತಡೆಯಲು ಕ್ರಮ: ಸಚಿವ ಜೆ.ಸಿ.ಮಾಧುಸ್ವಾಮಿ

Update: 2023-02-24 00:36 IST

ಬೆಂಗಳೂರು, ಫೆ. 23: ವನ್ಯ ಮೃಗಗಳು ಅರಣ್ಯ ಪ್ರದೇಶದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಬರದಂತೆ ತಡೆಯಲು ಆನೆ ಕಾರಿಡಾರ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಗುರುವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಮಂಜೇಗೌಡರ ಪ್ರಶ್ನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ ಅವರು, ವನ್ಯಜೀವಿ ದಾಳಿಯಿಂದ ಸಾವನ್ನಪ್ಪುವ ನಾಗರಿಕರಿಗೆ ಏಳೂವರೆ ಲಕ್ಷ ರೂ.ಗಳಿಂದ 15ಲಕ್ಷ ರೂ.ಗಳ ವರೆಗೆ ಪರಿಹಾರ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಮೃತಪಟ್ಟರೆ ಪರಿಹಾರ ಮೊತ್ತವನ್ನು 30 ಲಕ್ಷ ರೂ.ನಿಂದ 50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ವನ್ಯಜೀವಿ ದಾಳಿಯಿಂದ ಮೃತಪಟ್ಟ ರೈತರ ಕುಟುಂಬಕ್ಕೆ ಮಾಸಿಕ 2 ಸಾವಿರ ರೂ. ಪರಿಹಾರ ನೀಡುತ್ತಿದ್ದನ್ನು 4 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಸರಕಾರ ಎಲ್ಲ ಕಾರ್ಯಕ್ರಮಗಳ ಮೊತ್ತವನ್ನು  ದ್ವಿಗುಣಗೊಳಿಸಲಾಗಿದೆ ಎಂದರು.

Similar News